ಪರಿಚಯ ಕಾರ್ಯಕ್ರಮ
ಕುಂದಾಪುರ: ದಿನಾಂಕ 9ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ್ ಪ್ರಭು ಮಾತನಾಡಿ ವಿದ್ಯಾರ್ಥಿಗಳು ಕನಸು ಕಟ್ಟಿಕೊಂಡು ಕಾಲೇಜಿಗೆ ಪ್ರವೇಶ ತೆಗೆದುಕೊಂಡಿದ್ದಾರೆ. ಉನ್ನತ ಗುರಿಯನ್ನು ಕಟ್ಟಿಕೊಂಡಿದ್ದಾರೆ. ವಿದ್ಯಾರ್ಥಿಗಳು ಇಲ್ಲಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಸಾಧನೆ ಮಾಡುವತ್ತ ಹೆಜ್ಜೆ ಹಾಕಬೇಕು. ಮುಂದಿನ ದಿನಗಳಲ್ಲಿ ಪಿ.ಯು.ಸಿ ನಂತರ ಹೆಚ್ಚಿನ ಶಿಕ್ಷಣ ಪಡೆಯಲು ಅವಕಾಶವಿದೆ.
ಸವಾಲುಗಳನ್ನು ಎದುರಿಸಲು ತಯಾರಾಗಿ. ಜೀವನದಲ್ಲಿ ಯಶಸ್ಸನ್ನು ಪಡೆಯುವುದರೊಂದಿಗೆ ಗುರು ಹಿರಿಯರನ್ನು ಕಲಿತ ಶಿಕ್ಷಣ ಸಂಸ್ಥೆಯ ಬಗ್ಗೆ ಗೌರವದಿಂದಿರಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ಸದಾನಂದ ಛಾತ್ರ ಮತ್ತು ರಾಜೇಂದ್ರ ತೋಳಾರ್ ಮತ್ತು ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಪ್ರಾಸ್ತಾವಿಕವಾಗಿ ಮಾತನಾಡಿ ಕಾಲೇಜಿನ ಕುರಿತು ಮಾಹಿತಿ ನೀಡಿದರು.
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿಯರಾದ ಡಾ. ಸರೋಜಾ ಎಂ. ಸ್ವಾಗತಿಸಿ, ಗೀತಾ ಪ್ರಭು ವಂದಿಸಿ, ರೇಣುಕಾ ಕಾರ್ಯಕ್ರಮ ನಿರೂಪಿಸಿದರು.
Comments
Post a Comment