ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ ಕ್ರಾಸ್ ಘಟಕದ ವತಿಯಿಂದ " ಯಶಸ್ಸಿನಲ್ಲಿ ಗುರುವಿನ ಪಾತ್ರ" ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ

 ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ ಕ್ರಾಸ್  ಘಟಕದ ವತಿಯಿಂದ " ಯಶಸ್ಸಿನಲ್ಲಿ ಗುರುವಿನ ಪಾತ್ರ" ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.



ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈಯ ಇಸ್ಕಾನ್ ಸಂಸ್ಥೆಯ  ಲೋಕಭವನ ಮಾತಾಜಿ ಆಗಮಿಸಿ ವ್ಯಕ್ತಿಯ ಜೀವನದಲ್ಲಿ ಒಬ್ಬ ಗುರುವಿನ ಪಾತ್ರ ಯಾವ ರೀತಿಯಲ್ಲಿ ಬಹುಮುಖ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ  ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ  ಭಜನಾ ಕಾರ್ಯಕ್ರಮ ನಡೆಯಿತು.

ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊ.ಸತ್ಯನಾರಾಯಣ ಸ್ವಾಗತಿಸಿದರು.ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಾಕಾರಿಣಿ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Comments

Popular posts from this blog