ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ್ದ "ಯುವಜನತೆಯಲ್ಲಿ ಮಾನಸಿಕ ಸ್ವಾಸ್ಥ್ಯ" ಎಂಬ ವಿಷಯದ ಕುರಿತು ಉಪನ್ಯಾಸ
ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಿದ್ದ "ಯುವಜನತೆಯಲ್ಲಿ ಮಾನಸಿಕ ಸ್ವಾಸ್ಥ್ಯ" ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಉಡುಪಿಯ ಡಾ.ಎ.ವಿ.ಬಾಳಿಗ ಆಸ್ಪತ್ರೆಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಅವರು ಇಂದಿನ ಯುವಜನತೆಯು ಈಗಿನ ಜೀವನಶೈಲಿಯಿಂದಾಗಿ ಬೇಗ ಒತ್ತಡಗಳಿಗೆ ಒಳಗಾಗುತ್ತಾರೆ. ಯುವಜನತೆ ಒತ್ತಡ ನಿರ್ವಹಣೆಯ ಕಲೆಯನ್ನು ಕರಗತ ಮಾಡಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ನಿಶಾ ಎಂ. ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿನಿಯರಾದ ಕಾವ್ಯ ಹೆಚ್. ಸ್ವಾಗತಿಸಿ, ಅಂಜನಾದೇವಿ ಕಾರ್ಯಕ್ರಮ ನಿರ್ವಹಿಸಿ, ನೀಲಾ ಪರಿಚಯಿಸಿ, ಶೃತಿ ವಂದಿಸಿದರು.
Comments
Post a Comment