ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಟೆಬಲ್ ಟೆನಿಸ್ ಟೂರ್ನಾಮೆಂಟ್.

 





ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಟೆಬಲ್  ಟೆನಿಸ್ ಟೂರ್ನಾಮೆಂಟ್ ನಡೆಯಿತು. 
ಅಂತಿಮ ಪಂದ್ಯದಲ್ಲಿ ಹುಡುಗರು ವಿಭಾಗದಲ್ಲಿ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೊದಲ ಸ್ಥಾನ ಪಡೆದು ಚಾಂಪಿಯನ್ ತಂಡವಾಯಿತು. ಮಡಿಕೇರಿಯ ಎಫ್.ಎಂ.ಕೆ.ಎಂ.ಸಿ ಕಾಲೇಜು ರನ್ನರ್ ಅಫ್ ಆಗಿ ದ್ವಿತೀಯ ಸ್ಥಾನ ಪಡೆಯಿತು. ತೃತೀಯ ಸ್ಥಾನವನ್ನು ಪುತ್ತೂರಿನ ವಿವೇಕಾನಂದ ಕಾಲೇಜು ಪಡೆಯಿತು.
ಹುಡುಗಿಯರ ವಿಭಾಗದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಶಿಪ್ ಪಡೆಯಿತು. ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ರನ್ನರ್ ಅಫ್ ಆಗಿ ದ್ವಿತೀಯ ಸ್ಥಾನ ಪಡೆಯಿತು. ತೃತೀಯ ಸ್ಥಾನವನ್ನು ಎಸ್.ಡಿ.ಎಂ ಕಾಲೇಜು ಉಜಿರೆ ಪಡೆಯಿತು. ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ  ನಿತೀಶ್ ಸುವರ್ಣ ಮತ್ತು ಉಡುಪಿಯ ಪೂರ್ಣಪ್ರಜ್ಞ ಕಾಲೇಜು ತಂಡದ ಭೂಮಿಕಾ ಪೂಜಾರಿ   ಟೂರ್ನಾಮೆಂಟ್ ನ ಅತ್ಯುತ್ತಮ ಆಟಗಾರರಾಗಿ ಹೊರಹೊಮ್ಮಿದರು.
ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ದೋಮ ಚಂದ್ರಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಿದ್ದರು. 
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಟಿ.ಪ್ರಕಾಶ್ ಸೋನ್ಸ್, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜಾ, ವೀಕ್ಷಕರಾದ ಜಯರಾಮ ರೈ, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಮಂಗಳೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ  ಜೇಮ್ಸ್ ಒಲಿವರ್ ಭಂಡಾರ್ಕಾರ್ಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಕುಂದಾಪುರದ ಟಾರ್ಪೋಡೋಸ್ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷ ಗೌತಮ್ ಶೆಟ್ಟಿ ಮತ್ತು ಟೇಬಲ್ ಟೆನಿಸ್ ತರಬೇತುದಾರ ಅಶ್ವಿನ್ ಕುಮಾರ್ ಪಡುಕೋಣೆ ಮಂಗಳೂರು ವಿಶ್ವವಿದ್ಯಾಲಯದಿಂದ ನಿಯುಕ್ತರಾದ ವೀಕ್ಷಣೆ ಕಾರ ಬಿಜು ಜಾಕೋಬ್ ಮತ್ತು ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ  ಡಾ.ಶುಭಕರಾಚಾರಿ
 ವಿಜೇತರಿಗೆ ಬಹುಮಾನ ವಿತರಿಸಿದರು.


Comments

Popular posts from this blog

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ