ಪ್ರತಿಭಾ ಪ್ರದರ್ಶನ
ಕುಂದಾಪುರ: ಆಗಸ್ಟ್ 15ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಪ್ರಯುಕ್ತ ನಡೆದ - ಅಂತರ್ ತರಗತಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ್ ಕಾಮತ್ ಉದ್ಘಾಟಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬರಹಗಾರ ನರೇಂದ್ರ ಗಂಗೊಳ್ಳಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಸ್ವಾಗತಿಸಿದರು. ಉಪನ್ಯಾಸಕರಾದ ದುರ್ಗಾಪ್ರಸಾದ್ ವಂದಿಸಿ ಸುಮಾ ಕಾರ್ಯಕ್ರಮ ನಿರೂಪಿಸಿದರು.
Comments
Post a Comment