Posts

Showing posts from September, 2022

An awareness program on "Save the Soil"

Image
An awareness program on "Save the Soil"   Sahil Jha speaking Save Soil Campaign Kundapur: An awareness program on "Save the Soil" was held on September 20 at Bhandarkar's College here in collaboration with the Youth Red Cross Unit  of the college. Sahil Jha from Kolkata who arrived as the chief guest of the program spoke, soil   It is an integral part of our environment and life.  Soil needs to be saved for sustainable agriculture and environment.  Traveling thousands of kilometers across the country by bicycle to spread awareness about soil conservation.  "Talk about the soil, sing about the soil, breathe the soil, live from the soil" let's all come together and tell the importance of the soil and protect the soil.  You are also called to be involved in soil protection through various social networks and media.  The program was presided over by the principal of the college.  N. P.  Narayana Shetty was in charge. On this occasion Ja...

ದೆಹಲಿಯಲ್ಲಿ ನಡೆಯಲಿರುವ"ಥಲ್ ಸೈನಿಕ್ ಶಿಬಿರ" ದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ ಗಳಾದ ಎಸ್.ಯು.ಒ.ರಂಜಿತ್ ಹಾಗೂ ಜೆ.ಯು.ಒ ಆನ್ಸ್ಟನ್ ಇಮ್ಯಾನ್ಯುಯಲ್ ರೆಬೆಲ್ಲೊ

Image
  ದೆಹಲಿಯಲ್ಲಿ ನಡೆಯಲಿರುವ"ಥಲ್ ಸೈನಿಕ್ ಶಿಬಿರ" ದಲ್ಲಿ  ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ ಗಳಾದ ಎಸ್.ಯು.ಒ.ರಂಜಿತ್ ಹಾಗೂ ಜೆ.ಯು.ಒ ಆನ್ಸ್ಟನ್ ಇಮ್ಯಾನ್ಯುಯಲ್ ರೆಬೆಲ್ಲೊ  J.A.O Anston Emmanuel Rebello S.U.O Ranjith ಕುಂದಾಪುರ: ಇಲ್ಲಿನ   ಭಂಡಾರ್ಕಾರ್ಸ್ ಕಾಲೇಜಿನ   ಎನ್.ಸಿ.ಸಿ ಆರ್ಮಿ ಕೆಡೆಟ್ ಗಳಾದ ಎಸ್.ಯು.ಒ.ರಂಜಿತ್ ಹಾಗೂ ಜೆ.ಯು.ಒ ಆನ್ಸ್ಟನ್ ಇಮ್ಯಾನ್ಯುಯಲ್ ರೆಬೆಲ್ಲೊ ಇವರುಗಳು ಇದೆ 14ನೇ ಸೆಪ್ಟೆಂಬರ್ 2022ರಿಂದ 25ನೇ ಸೆಪ್ಟೆಂಬರ್ 2022ರವರೆಗೆ ದೆಹಲಿಯಲ್ಲಿ ನಡೆಯಲಿರುವ "ಥಲ್ ಸೈನಿಕ್ ಶಿಬಿರ"ದಲ್ಲಿ ಭಾಗವಹಿಸುತ್ತಿದ್ದಾರೆ.  ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇವರಿಗೆ ಕಾಲೇಜಿನ ಎನ್ ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರ್ ಎಂ.ಎಲ್ ತರಬೇತಿ ನೀಡಿದ್ದರು.

ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ

Image
  ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ಸೆಪ್ಟೆಂಬರ್ 1ರಂದು ಕಾಲೇಜಿನಲ್ಲಿ  ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪರಿಚಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರುಗಳು  ಕಾಲೇಜಿನ ಇತಿಹಾಸ, ವಿವಿಧ ವಿಭಾಗಗಳು, ಸೌಲಭ್ಯಗಳು, ವೃತ್ತಿ ಮಾರ್ಗದರ್ಶನ, ಗ್ರಂಥಾಲಯ,ಪಾಠೇತರ ಚಟುವಟಿಕೆಗಳು, ಮಾಹಿತಿ ತಂತ್ರಜ್ಞಾನ, ಮಹಿಳಾ ವೇದಿಕೆ, ವಿದ್ಯಾರ್ಥಿ ಕ್ಷೇಮಪಾಲನಾ ಕುರಿತು ವಿಶೇಷ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಪಿ.ನಾರಾಯಣ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಲಲಿತಾದೇವಿ, ಮಹಿಳಾ ವೇದಿಕೆ ಸಂಯೋಜಕರಾದ ಡಾ.ಯಶವಂತಿ ಕೆ. ಇತಿಹಾಸ ವಿಭಾಗದ ಮುಖ್ಯಸ್ಥ ಕೆ.ಗೋಪಾಲ್, ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಕಿರಣ್ ಹಂದೆ, ಮತ್ತಿತರರು ಉಪಸ್ಥಿತರಿದ್ದರು.

ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು: ನರೇಂದ್ರ ಕುಮಾರ್ ಕೋಟ

Image
  ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು: ನರೇಂದ್ರ ಕುಮಾರ್ ಕೋಟ ಕುಂದಾಪುರ: ಮೇಧಾವಿಗಳು ತಿಳಿದವರು ಶಿಕ್ಷಣದ ಕುರಿತು ಸಾಕಷ್ಟು ವ್ಯಾಖ್ಯಾನ ಪ್ರಕಾರ ಶಿಕ್ಷಣ ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಾಗಬಾರದು. ಅದರಾಚೆಗೂ ನಮ್ಮ ಬದುಕಿಗೆ ಪೂರಕವಾದ ಶಿಕ್ಷಣವು ದೊರೆತಾಗ ಆ ಶಿಕ್ಷಣಕ್ಕೆ ಅರ್ಥ ಬರುತ್ತದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಶಿಕ್ಷಣವು ಬೇರೆ ಬೇರೆ ಆಯಾಮವನ್ನು ಪಡೆದುಕೊಂಡಿದೆ. ಹೊಸ ಶಿಕ್ಷಣ ನೀತಿಯೂ ಮಕ್ಕಳನ್ನು ತರಗತಿ ಮಾತ್ರವಲ್ಲದೇ ಅದರಾಚೆಗೆ ತೆರಡಿದಲು ಸಾಧ್ಯವಾಗಿದೆ.  ವಿದ್ಯಾರ್ಥಿಗಳೆಲ್ಲರೂ ಶೈಕ್ಷಣಿಕ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಸರ್ವಪಳ್ಳಿ ರಾಧಾಕೃಷ್ಣನ್ ಅವರನ್ನು ಇಂದು ಮಾತ್ರ ನೆನೆಯುವುದು ಅಲ್ಲ, ಅವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ವಿವೇಕ ಪ್ರೌಢಶಾಲಾ ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು.      ಅವರು  ಸೆಪ್ಟೆಂಬರ್ 5ರಂದು ಇಲ್ಲಿನ ಭಂಡಾರ್ ಕಾರ್ಸ್ ಕಲಾ ವಿಜ್ಞಾನ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿ, ಮಾತನಾಡಿದರು. ಸಾಮಾನ್ಯವಾಗಿ ಎಲ್ಲರ ಆತಂಕ, ಭಯ ಹಾಗೂ ಧಾವಂತಗಳಲ್ಲಿಯೇ ಬದುಕುತ್ತಿದ್ದೇವೆ. ಇದನ್ನ ಮನೋ ಮಾಲಿನ್ಯ ಎನ್ನಬಹುದು. ಮನ ಹಾಗೂ ಮನಸ್ಸು ಕತ್ತಲೆ ಮಾಡಿಕೊಂಡು ಬೇರೆ ಕಡೆಯಲ್ಲಿ ಬೆಳಕು ಹುಡುಕುವ ಪ್ರಯತ್ನ ಮಾಡುತ್ತೇವೆ. ಆದರೆ ಯಾವತ್ತೂ ಮನಸ್ಸಿನಲ...

ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ" ಕುರಿತು ಜಾಗೃತಿ ಕಾರ್ಯಕ್ರಮ

Image
  ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ" ಕುರಿತು ಜಾಗೃತಿ ಕಾರ್ಯಕ್ರಮ ಕುಂದಾಪುರ: ಆಗಸ್ಟ್ 29ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ  ಸೇವಾ ಯೋಜನೆ ಘಟಕ, ಯುಥ್ ರೆಡ್ ಕ್ರಾಸ್ ಘಟಕ, ಎನ್.ಸಿ.ಸಿ ಘಟಕ, ಭಾರತ ಸರ್ಕಾರದ ಭೂವಿಜ್ಞಾನ ಸಚಿವಾಲಯ, ದೆಹಲಿ, ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಮಂಗಳೂರಿನ ಪಿಲಿಕುಳ ವಿಜ್ಞಾನ ಕೇಂದ್ರ  ಮತ್ತು ಪುರಸಭೆ ಕುಂದಾಪುರ ಇವರ ಸಹಯೋಗದಲ್ಲಿ " ಸ್ವಚ್ಛ ಕರಾವಳಿ ಸುರಕ್ಷಿತ ಸಮುದ್ರ" ಕುರಿತು ಜಾಗೃತಿ ಕಾರ್ಯಕ್ರಮ  ಕಾಲೇಜಿನ ರಾಧಾಬಾಯಿ ಹಾಲ್ ನಲ್ಲಿ  ನಡೆಯಿತು.  ಮಣಿಪಾಲದ ಎಂ.ಐ.ಟಿಯ ಸಹಪ್ರಾಧ್ಯಾಪಕ  ಡಾ. ಅನಿಶ್ ಕುಮಾರ್ ವಾರಿಯರ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಅವರು ಸಮುದ್ರದ ಮಾಲಿನ್ಯಕ್ಕೆ ಕಾರಣವಾಗುವ ಅಂಶಗಳು ಮತ್ತು ಸಮುದ್ರದ ಮಾಲಿನ್ಯ ತಡೆಯಲು ಇರುವಂತಹ ಪರಿಹಾರಾತ್ಮಕ ಸಲಹೆಗಳ ಕುರಿತು ಮಾಹಿತಿ ನೀಡಿದರು.  ಇನ್ನೋರ್ವ ಅತಿಥಿ  ಕುಂದಾಪುರ ಪುರಸಭೆಯ ಪರಿಸರ ವಿಜ್ಞಾನಿ ( Engineer) ಗುರುಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್  ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ...

ಸೀನಿಯರ್ಸ್ ಡೇ

  ಕುಂದಾಪುರ: ಆಗಸ್ಟ್ 27ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ "ಸೀನಿಯರ್ಸ್ ಡೇ" ಕಾರ್ಯಕ್ರಮ ನಡೆಯಿತು ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.  ಈ ಸಂದರ್ಭದಲ್ಲಿ ಇತ್ತೀಚೆಗೆ ಥೈಲ್ಯಾಂಡ್ ದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಯಲ್ಲಿ ಕಂಚಿನ ಪದಕ ಪಡೆದ ವಿದ್ಯಾರ್ಥಿ ಅಜಯ್ ದೇವಾಡಿಗ ಅವರನ್ನು . ಅವರನ್ನು ಕುಂದಾಪುರ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಸನ್ಮಾನಿಸಲಾಯಿತು. ಅವರೊಂದಿಗೆ ಭಾಗವಹಿಸಿದ ಪವನ್ ಪೂಜಾರಿ, ಚೇತನ್, ಭರತ್ ತರಬೇತುದಾರ ಕೀರ್ತಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಶಾಂತಾರಾಮ್ ಪ್ರಭು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಸದಾನಂದ ಛಾತ್ರ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಲಲಿತಾದೇವಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ, ಮಹಿಳಾ ವೇದಿಕೆ ಸಂಯೋಜಕರಾದ ಡಾ.ಯಶವಂತಿ ಕೆ., ವಾಣಿಜ್ಯ ವಿಭಾಗದ ಮುಖ್ಯಸ್ಥ ಅರುಣ್ ಎ.ಎಸ್, ಕಂಪ್ಯೂಟರ್ ಸೈನ್ಸ್ ವಿಭಾಗ ಉಪನ್ಯಾಸಕ ಕೃಷ್ಣ,  ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥೆ ಅರ್ಚನಾ ಅರವಿಂದ್ ಉಪಸ್ಥಿತರಿದ್ದರು.  ನಂತರ ವಿದ್ಯಾರ್ಥಿಗಳಿಂದ ಚೆಂಡೆ ವ...