ಭಂಡಾರ್ಕಾರ್ಸ್: 47ನೇ ಯಕ್ಷಗಾನ ತಾಳಮದ್ದಳೆ ಮತ್ತು ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ
47ನೇ ಯಕ್ಷಗಾನ ತಾಳಮದ್ದಳೆ ಮತ್ತು ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ
ಕುಂದಾಪುರ: ನವೆಂಬರ್ 1 ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಆವರ್ತ ಯಕ್ಷವೇದಿಕೆಯ ಆಶ್ರಯದಲ್ಲಿ 47ನೇ ಯಕ್ಷಗಾನ ತಾಳಮದ್ದಳೆ ಮತ್ತು ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ಸಮಾರಂಭ ನಡೆಯಿತು. ತೆಂಕುತಿಟ್ಟಿನ ಯುವ ಯಕ್ಷಗಾನ ಕಲಾವಿದೆ ಮಾನ್ಯಶ್ರೀ ಕುಲ್ಕುಂದ ಮತ್ತು ಬಡಗುತಿಟ್ಟಿನ ಯುವ ಕಲಾವಿದ ಪ್ರಸನ್ನ ಶೆಟ್ಟಿಗಾರ್ ಮಂದಾರ್ತಿ ಅವರಿಗೆ ಡಾ.ಹೆಚ್.ಶಾಂತಾರಾಮ್ ಯಕ್ಷಗಾನ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಉಡುಪಿ ಯಕ್ಷಗಾನ ಕಲಾರಂಗದ ಪ್ರದಾನ ಕಾರ್ಯದರ್ಶಿ ಮುರುಳಿ ಕಡೇಕಾರ್ ಮತ್ತು ಸಾಲಿಗ್ರಾಮ ಮೇಳದ ಪ್ರಮುಖ ಪಿ.ಕಿಶನ್ ಹೆಗ್ಡೆ ಅಭಿನಂದನಾ ಭಾಷಣವನ್ನು ಮಾಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಯಜುಷಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಕಾವ್ಯ ಹಿಂದೆ ಪರಿಚಯಿಸಿದರು.
Comments
Post a Comment