ಕುಂದಾಪುರ: ನವೆಂಬರ್ 9ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಾಪಕರ ಸಂಘದ ಆಶ್ರಯದಲ್ಲಿ "ಕ್ಯಾನ್ಸರ್ ಕುರಿತು ಜಾಗೃತಿ"ಕಾರ್ಯಕ್ರಮ ನಡೆಯಿತು
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮುಂಬೈ ನ ಕಾರ್ಕಿನೋಸ್ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್ ನ ಸಾರ್ವಜನಿಕ ಆರೋಗ್ಯ ಸಲಹೆಗಾರಾದ ಡಾ.ಪ್ರಶಾಂತ ಮಾತನಾಡಿ ಕ್ಯಾನ್ಸರ್ ರೋಗವನ್ನು ತಡೆಗಟ್ಟಲು ಇರುವ ಮಾರ್ಗೋಪಾಯಗಳನ್ನು ತಿಳಿಸಿದರು.
ಅವರು ಮಾತನಾಡಿ ನಮ್ಮ ಜೀವನಶೈಲಿ ಹಲವು ರೋಗಗಳಿಗೆ ಕಾರಣವಾಗುತ್ತದೆ. ಆದ್ದರಿಂದ ನಮ್ಮ ಜೀವನಶೈಲಿಯನ್ನು ಉತ್ತಮವಾಗಿ ನಿರ್ವಹಿಸಲು ನಾವು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಅಧ್ಯಕ್ಷತೆಯನ್ನು ವಹಿಸಿದ್ದರು.
ಅಧ್ಯಾಪಕರ ಸಂಘದ ಉಪಾಧ್ಯಕ್ಷೆ ಡಾ.ಸರೋಜ ಎಂ. ಉಪಸ್ಥಿತರಿದ್ದರು.
ಅಧ್ಯಾಪಕರ ಸಂಘದ ಖಜಾಂಚಿ ದುರ್ಗಾಪ್ರಸಾದ್ ಮತ್ತು ವಂದಿಸಿದರು. ಸಹಕಾರ್ಯದರ್ಶಿ ಸುಮಲತಾ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.
Comments
Post a Comment