ಸಂವಿಧಾನ ದಿನಾಚರಣೆ

 

ಸಂವಿಧಾನ ದಿನಾಚರಣೆ 







ಬಿಸಿಕೆ: ನವೆಂಬರ್ 26ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನೆಹರು ಯುವ ಕೇಂದ್ರ ,ಉಡುಪಿ ಮತ್ತು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ (ರಿ), ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ವಕೀಲರ ಸಂಘದ ಅಧ್ಯಕ್ಷ  ಸೋಮನಾಥ ಹೆಗ್ಡೆ    ಮಾತನಾಡಿ ದೇಶದಲ್ಲಿ ಅನಕ್ಷರತೆ ಮತ್ತು ವೈ ವೈವಿಧ್ಯತೆಯನ್ನು ಹೊಂದಿದ ನಮ್ಮ ದೇಶದಲ್ಲಿ ಎಲ್ಲರನ್ನೂ ಒಂದಾಗಿಸುವ ಸಂವಿಧಾನದ ಅಗತ್ಯ ಇತ್ತು.  ಈ ಸಂದರ್ಭದಲ್ಲಿ ಸಂವಿಧಾನ ಸಮಿತಿಯನ್ನು ರಚಿಸಲಾಯಿತು. ನಂತರ ಕರಡು ಸಮಿತಿ ರಚಿಸಲಾಯಿತು. ಭಾರತದ ಸಂವಿಧಾನ ರಚನಾ ಸಮಿತಿಯು ವಿವಿಧ ದೇಶಗಳಿಗೆ ಸಂಚರಿಸಿ  ಭಾರತದ ಸಂವಿಧಾನ  ರಚಿಸಲಾಯಿತು ಎಂದು ಹೇಳಿದರು. ಜನತೆಗೆ ಪೂರಕ ಶ್ರೇಷ್ಠ ಸಂವಿಧಾನ ನಮ್ಮ ಭಾರತ ದೇಶದ್ದಾಗಿದೆ. ನಾವು ಮೊದಲು ಮನುಷ್ಯರಾಗಬೇಕು. ಸಂವಿಧಾನವನ್ನು ಗೌರವಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಹಿರಿಯ ವಕೀಲರಾದ ಸಂತೋಷ್ ಕುಮಾರ್ ಶೆಟ್ಟಿ ಗಿಳಿಯಾರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಗೂ ನ್ಯಾಯ ದೊರೆಯಬೇಕು ಎಂಬ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ಕಾನೂನು ಸೇವೆಯನ್ನು ನೀಡಲಾಗುತ್ತಿದೆ.   ಸೂಕ್ತ ರೀತಿಯಲ್ಲಿ ಕಾನೂನು ಸೇವೆಯನ್ನು ನೀಡುವುದು ಇದರ ಉದ್ದೇಶವಾಗಿದೆ. ನಮಗೆ ಸ್ವಾತಂತ್ರ್ಯದ ಹಕ್ಕನ್ನು ನೀಡಲಾಗಿದೆ. ನಿಮಗೆ ಅನಿಸಿದ್ದನ್ನು ಅಭಿವ್ಯಕ್ತಿಸುವ ಹಕ್ಕು ಇದೆ ಆದರೆ ದೇಶದ ಸಮಗ್ರತೆ ಒಗ್ಗಟ್ಟು ಮತ್ತು ಐಕ್ಯತೆಗೆ ತೊಂದರೆ ಮಾಡಬಾರದು. ಹೀಗೆ ಹಲವು ಹಕ್ಕುಗಳನ್ನು ಸಂವಿಧಾನದ ನೆಲೆಯಲ್ಲಿ ನೀಡಲಾಗಿದೆ ಎಂದು ಹೇಳಿದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.

ಈ ಸಂದರ್ಭದಲ್ಲಿ  ವಿಧ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಉಡುಪಿಯ  ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿಸೋಜಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಸ್ವಾಗತಿಸಿದರು.  ಭಂಡಾರ್ಕಾರ್ಸ್ ಕಾಲೇಜಿನ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಅಕ್ಷತಾ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿದರು.


Comments

Popular posts from this blog

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ