ರಕ್ಷಕ-ಶಿಕ್ಷಕ ಸಂಘದ ಸಭೆ
ರಕ್ಷಕ-ಶಿಕ್ಷಕ ಸಂಘದ ಸಭೆ
ಬಿಸಿಕೆ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನವೆಂಬರ್ 12ರಂದು ರಕ್ಷಕ-ಶಿಕ್ಷಕ ಸಂಘದ ಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ ಪೋಷಕರು ಮತ್ತು ಮಕ್ಕಳು ನಡುವೆ ಎಲ್ಲಾ ರೀತಿಯಿಂದಲೂ ಒಳ್ಳೆಯ ಬಾಂಧವ್ಯವಿರಬೇಕು. ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಪೋಷಕರು ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಮೇಸ್ತ ಕಾರ್ಯದರ್ಶಿ ಲಕ್ಷ್ಮಿಕಾಂತ ಮಡಿವಾಳ ಉಪಸ್ಥಿತರಿದ್ದರು
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶುಭಕರಾಚಾರಿ ಸ್ವಾಗತಿಸಿದರು. ಉಪನ್ಯಾಸಕಿ ರೋಹಿಣಿ ಹೆಚ್.ಬಿ ಕಾರ್ಯಕ್ರಮ ನಿರೂಪಿಸಿದರು.
Comments
Post a Comment