23 ಡಿಸೆಂಬರ್23 ರಿಂದ ಡಿಸೆಂಬರ್29ರವರೆಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ 2022-23
23 ಡಿಸೆಂಬರ್23 ರಿಂದ ಡಿಸೆಂಬರ್29ರವರೆಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ 2022-23
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ 2022-23 ಡಿಸೆಂಬರ್23 ರಿಂದ ಡಿಸೆಂಬರ್29ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದೂರಿ, ಹಾಲಾಡಿ ಎಂಬಲ್ಲಿ ನಡೆಯಲಿದೆ.
ಡಿಸೆಂಬರ್ 23ರಂದು ಶಿಬಿರದ ಉದ್ಘಾಟನಾ ನಡೆಯಲಿದೆ. ಶಿಬಿರವನ್ನು ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕರು ಕುಂದಾಪುರ ಕ್ಷೇತ್ರ ಇವರು ಉದ್ಘಾಟಿಸಲಿದ್ದಾರೆ.
25ರಂದು ಕಸ್ತೂರಬಾ ಆಸ್ಪತ್ರೆ ಮಣಿಪಾಲ ಮತ್ತು ಹಾಲಾಡಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮಸ್ಥರಿಗೆ ನುರಿತ ವೈದ್ಯರಿಂದ ಬ್ರಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿಸೆಂಬರ್ 24,26,26,27,28ರಂದು ವಿವಿಧ ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಡಿಸೆಂಬರ್ 29ರಂದು ಶಿಬಿರ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments
Post a Comment