ಡಿಸೆಂಬರ್ 24 : ವಿದ್ಯಾರ್ಥಿಗಳಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
ಡಿಸೆಂಬರ್ 24 : ವಿದ್ಯಾರ್ಥಿಗಳಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
ಕುಂದಾಪುರ: ಡಿಸೆಂಬರ್ 24 ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಸೊಸೈಟಿ (ರಿ), ಬೆಂಗಳೂರು ಇವರಿಂದ 2022-23 ಕಲಿಕಾ ವರ್ಷದ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ಆಯ್ಕೆ ಮಾಡಿದ 200 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯ ಮಾನ್ಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸ್ಕೂಲ್ ಆಫ್ ಮೆಡಿಸಿನ್, ಟೆಕ್ಸಾಸ್ ಎ&ಎಂ ಯೂನಿವರ್ಸಿಟಿ, ಯು.ಎಸ್.ಎ. ಇಲ್ಲಿನ ಪ್ರೊ. ಅಶೋಕ್ ಕೆ.ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು ವಹಿಸಲಿದ್ದಾರೆ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಸೊಸೈಟಿ (ರಿ), ಬೆಂಗಳೂರು ಇದರ ಪ್ರಕಟಣೆ ತಿಳಿಸಿದೆ.
Comments
Post a Comment