ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ


ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ

 



ಕುಂದಾಪುರ: ಏಪ್ರಿಲ್ 19ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಹಯವದನ ಉಪಾಧ್ಯಾಯ ಮಾತನಾಡಿ ಸಂಶೋಧನೆಯ ಕಾರ್ಯ ನಿರಂತರವಾಗಿರಬೇಕು. ಸಂಶೋಧಕನಾದವನು ವೈಜ್ಞಾನಿಕ ನೆಲೆಯಲ್ಲಿ ಆಲೋಚಿಸಬೇಕು. ಅವರವರ ಆಯ್ಕೆಯ ವಿಷಯದಲ್ಲಿ ಆಸಕ್ತಿಯಿಂದ ಸಂಶೋಧನೆ ಮಾಡಬೇಕೆ ಹೊರತು ಕಾಟಾಚಾರಕ್ಕೆ ಮಾಡಬಾರದು. ಹಾಗೆ ಸಂಶೋಧನೆಯ ಮೂಲಕ ಸಕಾರಾತ್ಮಕ ಬೆಳವಣಿಗೆಯನ್ನು ಕಂಡುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. 

ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಸಂಯೋಜಕರು ಮತ್ತು ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ.ಯಶವಂತಿ ಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Comments

Popular posts from this blog

ರಕ್ತದಾನ ಜೀವದಾನ : ಎಸ್. ಜಯಕರ್ ಶೆಟ್ಟಿ,

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ