ಡಾ.ಎಂ.ಬಿ.ನಟರಾಜ್ ಸನ್ಮಾನ
ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದ ಪ್ರೊ. ಡಾ.ಎಂ.ಬಿ.ನಟರಾಜ್ ಇವರ ಸನ್ಮಾನ
ಕುಂದಾಪುರ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ವತಿಯಿಂದ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾದ ಪ್ರೊ. ಡಾ.ಎಂ.ಬಿ.ನಟರಾಜ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ.ಲಲಿತಾದೇವಿ ಉಪಸ್ಥಿತರಿದ್ದರು.
ಉಪನ್ಯಾಸಕಿ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕರ ಸಂಘದ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ ವಂದಿಸಿದರು.
Comments
Post a Comment