ಕಾಲೇಜಿನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ
ಕಾಲೇಜಿ ನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ
ಕುಂದಾಪುರ : ಜೂ 14ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿ ನಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ ರಾಘವೇಂದ್ರ ಅವರು ಮಾತನಾಡಿ, ಪದವಿ ಜೀವನವು ಬಹು ಮುಖ್ಯವಾದದು ವಿದ್ಯಾರ್ಥಿಗಳಿಗೆ ಅಮೂಲ್ಯವಾದದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೊರೆಯುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸಮಯವನ್ನು ದುರುಪಯೋಗ ಮಾಡದೆ ಪಠ್ಯತರ ಚಟುವಟಿಕೆಯ ಜೊತೆಯಲ್ಲಿ ಸೃಜನಶೀಲ ಚಟುವಟಿಕೆಯನ್ನು ಅಳವಡಿಸಿಕೊಳ್ಳಬೇಕು. ಬರುವಂತಹ ಎಲ್ಲಾ ಅವಕಾಶಗಳನ್ನು ಉಪಯೋಗಿಸಿಕೊಂಡು ಭವಿಷ್ಯದಲ್ಲಿ ಬೆಳೆದು ಸಾಧನ ಮಾಡುವತ್ತ ನಿಮ್ಮ ಪ್ರಯತ್ನವಿರಬೇಕು ಎಂದು ಹೇಳಿದರು. ಸ್ಪೋರ್ಟ್ಸ್ ಕ್ಲಬ್ ಬ್ರಹ್ಮಾವರ ಇದರ ಅಧ್ಯಕ್ಷರಾದ ಎಂ, ಚಂದ್ರಶೇಖರ್ ಹೆಗಡೆ ಅವರನ್ನು ಕಾಲೇಜಿನಿಂದ ಸನ್ಮಾನಿಸಲಾಯಿತು. ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತರಾಮ್ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ ನಾರಾಯಣ ಶೆಟ್ಟಿ, ಭಂಡಾರಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ. ಎಂ. ಗೊಂಡ ರವರು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶುಭಕರ ಆಚಾರಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ರೋಹಿಣಿ ಹೆಚ್.ಬಿ ಕಾರ್ಯಕ್ರಮ ನಿರೂಪಿಸಿದರು.
Comments
Post a Comment