ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ
ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ
ಕುಂದಾಪುರ:ದಿನಾಂಕ 19-05-2023 ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ರಾಮಕೃಷ್ಣ ಭಟ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಅರುಣ್ ಎ ಎಸ್, ರಾಮಚಂದ್ರ ಆಚಾರ್, ಅಣ್ಣಪ್ಪ ಪೂಜಾರಿ ಹಾಗೂ ಉಪನ್ಯಾಸಕರಾದ ಗಿರಿರಾಜ್ ಭಟ್ ಉಪಸ್ಥಿತರಿದ್ದರು.
90 ವಿದ್ಯಾರ್ಥಿಗಳು ಒಂದು ದಿನದ ಈ ಶಿಬಿರದಲ್ಲಿ ಭಾಗವಹಿಸಿ ದೇವಸ್ಥಾನದ ಪರಿಸರವನ್ನು ಸ್ವಚ್ಛ ಗೊಳಿಸಿ, ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಪಾಲ್ಗೊಂಡರು.
Comments
Post a Comment