ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ
ಬಿ.ಸಿ.ಕೆ: ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು ಸಾಮರ್ಥ್ಯ ಸಾಹಿತ್ಯಕ್ಕೆ ಇದೆ ಎಂದು ಹೆಚ್.ಬಿ ಇಂದ್ರಕುಮಾರ್ ಹೇಳಿದರು . ಅವರು ಆಗಸ್ಟ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. ಅವರು ಸಾಹಿತ್ಯ ನಮ್ಮನ್ನು ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ . ಸಾಹಿತ್ಯ ದ ಕಥೆ ಕಾದಂಬರಿ ಕವನ ಸಂಕಲನಗಳನ್ನು ಬೇರೆ ಬೇರೆ ನೆಲೆಗಳಲ್ಲಿ ಅರ್ಥೈಸಬಹುದು. ಕೆಲವು ಸಂದರ್ಭಗಳಲ್ಲಿ ಸಾಹಿತ್ಯ ರಚನೆಗಳ ವಸ್ತು ತುಂಬಾ ಚೆನ್ನಾಗಿರುತ್ತದೆ ಮತ್ತು ಓದುಗರನ್ನು ಚಿಂತನೆಗೆ ಒಳಪಡಿಸಿ ಓದುವಂತೆ ಮಾಡುತ್ತದೆ. ಅಲ್ಲದೆ ಓದುಗರನ್ನು ಇನ್ನೂ ಹೆಚ್ಚು ಆಕರ್ಷಿಸುವಂತೆ ಮತ್ತು ಓದುವಂತೆ ಸಾಹಿತ್ಯದ ರಚನೆಯಾಗಬೇಕು. ಯಾವುದೇ ಸಾಹಿತ್ಯ ರಚನೆಯಲ್ಲಿ ಭಾಷೆ, ಸಮೃದ್ಧ, ನಿಗೂಢತೆ ಮತ್ತು ಮನಸಿಗೆ ಹಿತವೆನಿಸುವ ವಿಸ್ಮಯಗಳ ಹೂರಣವನ್ನು ಸಾಹಿತ್ಯವು ಒಳಗೊಂಡಿದ್ದರೆ ಓದುಗರನ್ನು ಹೆಚ್ಚು ಆಕರ್ಷಿಸುತ್ತದೆ. ಮನುಷ್ಯನ ಸಂವೇದನೆಯಲ್ಲಿಯೇ ಸಾಹಿತ್ಯ ಅಡಗಿದೆ. ಸಮಯದ ಪರಿವೆಯೇ ಇಲ್ಲದೆ ನಮ್ಮನ್ನು ಯಾವುದೋ ಲೋಕಕ್ಕೆ ಪ್ರವೇಶ ಮಾಡಿಸುವ ಶಕ್ತಿ ಸಾಹಿತ...