ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪರಿಷ್ಕೃತ ಪದವಿ ಮಟ್ಟದ ಇತಿಹಾಸ ಪಠ್ಯಗಳ ಅವಲೋಕನ"

ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪರಿಷ್ಕೃತ ಪದವಿ ಮಟ್ಟದ ಇತಿಹಾಸ ಪಠ್ಯಗಳ ಅವಲೋಕನ"

ಕುಂದಾಪುರ: ಸೆಪ್ಟೆಂಬರ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಇತಿಹಾಸ ವಿಭಾಗ ಮತ್ತು ಐಕ್ಯೂಎಸಿ ಮತ್ತು ಮಾನುಷಾ- ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳ ಇತಿಹಾಸ ಅಧ್ಯಾಪಕರ ಸಂಘದ ಸಹಯೋಗದಲ್ಲಿ "ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪರಿಷ್ಕೃತ ಪದವಿ ಮಟ್ಟದ ಇತಿಹಾಸ ಪಠ್ಯಗಳ ಅವಲೋಕನ" ಎಂಬ ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಎಸ್. ಸದಾನಂದ ಛಾತ್ರ ಮಾತನಾಡಿ ಹೊಸತನಕ್ಕೆ ಬದಲಾವಣೆಯಾಗುವಾಗ ಸಮಯ ಮತ್ತು ಅವಕಾಶ ಬೇಕಾಗುತ್ತದೆ. ಇಂತಹ ಕಾರ್ಯಾಗಾರಗಳು ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ. ಬದಲಾವಣೆಗೆ ತೆರೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.  
ವೇದಿಕೆಯಲ್ಲಿ ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಡಾ.ವಿಜಯ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಉಪಸ್ಥಿತರಿದ್ದರು.
ಮಾನುಷಾ ಇದರ ಅಧ್ಯಕ್ಷರಾದ ಜಯರಾಮ್ ಶೆಟ್ಟಿಗಾರ್ ಸ್ವಾಗತಿಸಿದರು. ಕಾರ್ಯದರ್ಶಿ ನವೀನ್ ಕೊಣಾಜೆ ವಂದಿಸಿದರು. ಆಂಗ್ಲ ವಿಭಾಗದ ಉಪನ್ಯಾಸಕಿ ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.
ನಂತರ ನಡೆದ ಪ್ರಥಮ ಗೋಷ್ಠಿಯ ಅಧ್ಯಕ್ಷತೆಯನ್ನು ಉಡುಪಿಯ ಅಜ್ಜರಕಾಡಿನ ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡಾ.ಗುರುರಾಜ್ ಪ್ರಭು ವಹಿಸಿದ್ದರು. 
ಎರಡನೇ ಗೋಷ್ಠಿಯ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಇತಿಹಾಸ ವಿಭಾಗ ಮುಖ್ಯಸ್ಥ ಪ್ರೊ. ಗೋಪಾಲ್ ಕೆ. ವಹಿಸಿದ್ದರು.
ಮೂರನೇ ಗೋಷ್ಠಿಯ ಅಧ್ಯಕ್ಷತೆಯನ್ನು ಉಡುಪಿಯ ಎಂಜಿಎಂ ಕಾಲೇಜಿನ ಲತಾ ನಾಯ್ಕ ವಹಿಸಿದ್ದರು.




Comments

Popular posts from this blog

ರಕ್ತದಾನ ಜೀವದಾನ : ಎಸ್. ಜಯಕರ್ ಶೆಟ್ಟಿ,

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

ಸಂಶೋಧನೆ ಮತ್ತು ಅಭಿವೃದ್ಧಿ ಕೋಶ ಮತ್ತು ಸಂಸ್ಕೃತ ವಿಭಾಗದ ಸಹಯೋಗದಲ್ಲಿ ಸಂಶೋಧನಾ ವಿಧಾನದ ಕುರಿತು ವಿಶೇಷ ಉಪನ್ಯಾಸ