ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ
ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ
ಕುಂದಾಪುರ : ಇತ್ತೀಚೆಗೆ ರಾಷ್ಟ್ರೀಯ ಸೇವಾ ಯೋಜನೆ,ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ ಹಾಗೂ ವಲಯ ಅರಣ್ಯ ಅಧಿಕಾರಿಗಳ ವಿಭಾಗ ಕುಂದಾಪುರ, ಕರ್ನಾಟಕ ಅರಣ್ಯ ಇಲಾಖೆ ಇವರ ಸಹಯೋಗದಲ್ಲಿ ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಸುಮಾರು 70 ಏನ್ ಎಸ್ ಎಸ್ ಸ್ವಯಂ ಸೇವಕರುಗಳು , 70 ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಈ ಬ್ರಹತ್ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ದಲ್ಲಿ ಉಪ ಅರಣ್ಯಅಧಿಕಾರಿಗಳಾದ ಉದಯ ನಾಯಕ್, ACF ಶ್ರೀ ಕ್ಲಿಫರ್ಡ್ ಲೂಬೋ, ವಲಯ ಅರಣ್ಯಧಿಕಾರಿಗಳಾದ ಕಿರಣ್ ಬಾಬು, ಉಪ ವಲಯ ಅರಣ್ಯಧಿಕಾರಿಗಳಾದ ಉದಯ ಹಾಗೂ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಅರುಣ್ ಎ ಎಸ್ ಹಾಗೂ ರಾಮಚಂದ್ರ ಆಚಾರ್ ಉಪಸ್ಥಿತರಿದ್ದರು.
Comments
Post a Comment