ಪ್ರಥಮ ಚಿಕಿತ್ಸೆ ಕುರಿತು ತರಬೇತಿ

 

ಪ್ರಥಮ ಚಿಕಿತ್ಸೆ ಕುರಿತು ತರಬೇತಿ

ಕುಂದಾಪುರ: ಅಕ್ಟೋಬರ್ 4ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಯೂಥ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕುಂದಾಪುರದ ಆಯುಷ್ ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸೋನಿ ಡಿಕೋಸ್ತಾ ಅವರು ವ್ಯಕ್ತಿಯನ್ನು ಬದುಕಿಸುವುದು  ಸಮಾಜದ  ಋಣವನ್ನು ತೀರಿಸುವುದಕ್ಕೆ ಒಂದು ಅವಕಾಶ ಸಿಕ್ಕಂತಾಗುತ್ತದೆ. ಅಂತಹ ಅವಕಾಶಗಳಲ್ಲಿ ಪ್ರಥಮ ಚಿಕಿತ್ಸೆಯೂ ಒಂದು.  ಅವಘಡಗಳು ಅಪಘಾತವಾದಲ್ಲಿ  ನಿಮ್ಮ ಪ್ರಥಮ ಚಿಕಿತ್ಸೆ ಜ್ಞಾನವನ್ನು ಬಳಸಿ ನಿಮ್ಮ ಜವಾಬ್ದಾರಿ ನಿಭಾಯಿಸಬೇಕು. ಜೀವವನ್ನು ಉಳಿಸುವ ಕೆಲಸ ಪುಣ್ಯದ ಕೆಲಸ ಎಂದು ಹೇಳಿದರು.








ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.

ವೇದಿಕೆಯಲ್ಲಿ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಅಧ್ಯಕ್ಷ ಜಯಕರ ಶೆಟ್ಟಿ, ಸದಸ್ಯರಾದ ಶಿವರಾಮ  ಶೆಟ್ಟಿ, ಗಣೇಶ್ ಆಚಾರ್ಯ,  ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ, ಕಾರ್ಯಕ್ರಮ ಅಧಿಕಾರಿಣಿ ವಿದ್ಯಾರಾಣಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪ್ರಜ್ಞಾ ಆಚಾರ್ಯ ಕಾರ್ಯಕ್ರಮವನ್ನು ನಿರ್ವಹಿಸಿ, ಸಿಂಚನ ಆಚಾರ್ಯ ಸ್ವಾಗತಿಸಿ, ಅರ್ಪಿತಾ ವಂದಿಸಿದರು.


Comments

Popular posts from this blog

ಇನ್ಸ್ಟಿಟ್ಯೂಷನ್ ಇನ್ನೋವೇಶನ ಕೋಶ ಇದರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ