BCK PUC: "Parampara" A Treditional Day
ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ " ಪರಂಪರಾ " ಕಾರ್ಯಕ್ರಮ ಕುಂದಾಪುರ : ಡಿಸೆಂಬರ್ 13 ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ " ಪರಂಪರಾ " ಕಾರ್ಯಕ್ರಮ ನಡೆಯಿತು . ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ ಪ್ರಭು ಅವರು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸಬೇಕು . ಮುಂದಿನ ಪೀಳಿಗೆಗೆ ಅದನ್ನು ಹಂಚುವಂತಹ ಕೆಲಸವೂ ಆಗಬೇಕು ಎಂದು ಕರೆ ನೀಡಿದರು . ಶಂಕರನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ನಿವೃತ್ತ ಇಂಗ್ಲಿಷ್ ಉಪನ್ಯಾಸಕರಾದ ರಾಮ ಭಟ್ ಅವರು ಭಾರತೀಯ ಸಂಸ್ಕೃತಿಯ ಮಹತ್ವದ ಕುರಿತು ಮಾತನಾಡಿದರು . ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಸ್ರೂರಿನ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜ್ಯೋತಿ ಬಿ . ಮಾತನ...