BCK: College Day

 ವಿದ್ಯೆಯಿಂದ ಅಮೃತತ್ವವನ್ನು ಹೊಂದಬಹುದು : ಎಸ್.ಎಸ್.ನಾಯಕ್

ಕುಂದಾಪುರ: ವಿದ್ಯೆಯಿಂದ ಅಮೃತತ್ವವನ್ನು ಹೊಂದಬಹುದು ಎಂದು ಎಸ್.ಎಸ್.ನಾಯಕ್ ಮತ್ತು  ಅಸೋಸಿಯೇಟ್ಸ್  ಎಂಬ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ  ಹಿರಿಯ ಪಾಲುದಾರರಾದ ಎಸ್.ಎಸ್.ನಾಯಕ್ ಹೇಳಿದರು .

ಅವರು ಮಾರ್ಚ್ 27ರಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ವಿದ್ಯಾ ಎಲ್ಲಾ ಸಂಪತ್ತಿಗಿಂತ  ಶ್ರೇಷ್ಠವಾದುದುಅದನ್ನು ಯಾರು ಕಳ್ಳತನ ಮಾಡಲಾಗುವುದಿಲ್ಲಕಸಿಯಲು ಸಾಧ್ಯವಿಲ್ಲದುಡ್ಡಿನಂತೆ ಖರ್ಚು ಮಾಡಲು ಆಗುವುದಿಲ್ಲಅದನ್ನು ಹೊರಲು ಯಾವುದೇ ಭಾರಿ ವಾಹನಗಳು ಬೇಡವಿದ್ಯೆ ಧನಕ್ಕಿಂತ ಶ್ರೇಷ್ಠವಾದುದುಇಂತಹ ಶ್ರೇಷ್ಠ ವಿದ್ಯಾ ಸಂಪತ್ತನ್ನು ಪಡೆಯಬೇಕಾದರೆ ಇಚ್ಛಾಶಕ್ತಿ ಮತ್ತು ಪ್ರಯತ್ನ ಬೇಕುಜೊತೆಗೆ ಅತ್ಯುತ್ತಮ ದೃಷ್ಟಿಕೋನವನ್ನು ಇಟ್ಟುಕೊಳ್ಳಿಅಲ್ಲದೇ ಸಾಧಿಸುವ ಇಚ್ಛೆ ಇದ್ದರೆ ಸಾಲದು ನಿಮ್ಮ ಗುರಿ ತಲುಪಬೇಕಾದರೆ ಪರಿಪೂರ್ಣವಾಗಿ ಕಾರ್ಯಪ್ರವೃತ್ತರಾಗಬೇಕುಎಲ್ಲವುದಕ್ಕಿಂತ ಮುಖ್ಯವಾಗಿ  ಪರೋಪಕಾರದ ಮನೋಭಾವ ಬೆಳೆಸಿಕೊಳ್ಳಬೇಕುಯಾಕೆಂದರೆ ನಮ್ಮ ಸಾಧನೆಯ ಹಾದಿಯಲ್ಲಿ  ನಮ್ಮ ತಂದೆ ತಾಯಿ ಕಲಿಸಿದ ಶಿಕ್ಷಣ ಸಂಸ್ಥೆ ಮತ್ತು ಜೀವನ ರೂಪಿಸಿದ ಸಮಾಜವನ್ನು ಮರೆಯಬಾರದು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ವಹಿಸಿದ್ದರು.

 ಸಂದರ್ಭದಲ್ಲಿ ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆದೇವದಾಸ್ ಕಾಮತ್ರಾಜೇಂದ್ರ ತೋಳಾರ್ ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈಪದವಿ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸದಾನಂದ ಕಾಮತ್ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಉಪಸ್ಥಿತರಿದ್ದರು.

ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು

ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.  ಚಿನ್ನದ ಪದಕ ಮತ್ತು ದತ್ತಿನಿಧಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಸ್ವಾಗತಿಸಿದರುಇತಿಹಾಸ ವಿಭಾಗ ಮುಖ್ಯಸ್ಥ ಪ್ರೊ.ಕೆ.ಗೋಪಾಲ್ ವಂದಿಸಿದರುಇಂಗ್ಲಿಷ್ ಉಪನ್ಯಾಸಕಿ ಪ್ರಿಯಾ ರೇಗೊ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ವಹಿಸಿದ್ದರು.

ಸಂದರ್ಭದಲ್ಲಿ ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ್ ಕಾಮತ್, ರಾಜೇಂದ್ರ ತೋಳಾರ್ ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ಪದವಿ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಸದಾನಂದ ಕಾಮತ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಉಪಸ್ಥಿತರಿದ್ದರು.

ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು

ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.  ಚಿನ್ನದ ಪದಕ ಮತ್ತು ದತ್ತಿನಿಧಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಸ್ವಾಗತಿಸಿದರು. ಇತಿಹಾಸ ವಿಭಾಗ ಮುಖ್ಯಸ್ಥ ಪ್ರೊ.ಕೆ.ಗೋಪಾಲ್ ವಂದಿಸಿದರು. ಇಂಗ್ಲಿಷ್ ಉಪನ್ಯಾಸಕಿ ಪ್ರಿಯಾ ರೇಗೊ ಕಾರ್ಯಕ್ರಮ ನಿರೂಪಿಸಿದರು.

Comments

Popular posts from this blog