BCK: Blood Donation Camp
ಭಂಡಾರ್ಕಾರ್ಸ್: "ರಕ್ತದಾನ ಶಿಬಿರ"
ಕುಂದಾಪುರ: ಮೇ 11ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಮತ್ತು ರೇಂಜರ್ಸ ಮತ್ತು ರೋವರ್ಸ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ
ಸಹಯೋಗದಲ್ಲಿ "ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿಗಳಾದ ಜಯಕಾರ ಶೆಟ್ಟಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಕಾರ್ಯದರ್ಶಿಗಳಾದ ಸೀತಾರಾಮ ಶೆಟ್ಟಿ ಖಜಾಂಚಿಗಳಾದ ಶಿವರಾಮ ಶೆಟ್ಟಿ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಶರಣ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಸಂಯೋಜಕರಾದ ರಿತಿನ್ ಎಸ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಸ್ವಾಗತಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಘಟಕದ ಕಾರ್ಯಕ್ರಮಾಧಿಕಾರಿಣಿ ವಿದ್ಯಾರಾಣಿ ವಂದಿಸಿದರು.
ಎನ್.ಸಿ.ಸಿ ಕೆಡೆಟ್ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.
Comments
Post a Comment