ಪ್ರಥಮ ಚಿಕಿತ್ಸೆ ಕುರಿತು ತರಬೇತಿ

ಪ್ರಥಮ ಚಿಕಿತ್ಸೆ ಕುರಿತು ತರಬೇತಿ ಕುಂದಾಪುರ : ಅಕ್ಟೋಬರ್ 4 ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಯೂಥ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಕುರಿತು ತರಬೇತಿ ಕಾರ್ಯಕ್ರಮ ನಡೆಯಿತು . ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕುಂದಾಪುರದ ಆಯುಷ್ ಧಾಮ ಆಸ್ಪತ್ರೆಯ ವೈದ್ಯಾಧಿಕಾರಿ ಡಾ . ಸೋನಿ ಡಿಕೋಸ್ತಾ ಅವರು ವ್ಯಕ್ತಿಯನ್ನು ಬದುಕಿಸುವುದು ಸಮಾಜದ ಋಣವನ್ನು ತೀರಿಸುವುದಕ್ಕೆ ಒಂದು ಅವಕಾಶ ಸಿಕ್ಕಂತಾಗುತ್ತದೆ . ಅಂತಹ ಅವಕಾಶಗಳಲ್ಲಿ ಪ್ರಥಮ ಚಿಕಿತ್ಸೆಯೂ ಒಂದು . ಅವಘಡಗಳು ಅಪಘಾತವಾದಲ್ಲಿ ನಿಮ್ಮ ಪ್ರಥಮ ಚಿಕಿತ್ಸೆ ಜ್ಞಾನವನ್ನು ಬಳಸಿ ನಿಮ್ಮ ಜವಾಬ್ದಾರಿ ನಿಭಾಯಿಸಬೇಕು . ಜೀವವನ್ನು ಉಳಿಸುವ ಕೆಲಸ ಪುಣ್ಯದ ಕೆಲಸ ಎಂದು ಹೇಳಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ . ಶುಭಕರಾಚಾರಿ ವಹಿಸಿದ್ದರು . ವೇದಿಕೆಯಲ್ಲಿ ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಅಧ್ಯಕ್ಷ ಜಯಕರ ಶೆಟ್ಟಿ , ಸದಸ್ಯರಾದ ಶಿವರಾಮ ಶೆಟ್ಟಿ , ಗಣೇಶ್ ಆಚಾರ್ಯ , ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ , ಕಾರ್ಯಕ್ರಮ ಅಧಿಕಾರಿಣಿ ವಿದ್ಯಾರಾಣಿ ಉಪಸ್ಥಿತರಿದ್ದರು . ವಿದ್ಯಾ...